An-Najm (The star)
53. ಅನ್ನಜ್ಮ್(ತಾರೆ)
ಅಲ್ಲಾಹನ ಹೆಸರಿಂದ - ಅವನು ಅಪಾರ ದಯಾಳು, ಕರುಣಾಮಯಿ.
53:1
وَالنَّجْمِ إِذَا هَوَىٰ ۞
ನಕ್ಷತ್ರವು ಕಣ್ಮರೆಯಾಗುವ ಸಮಯದ ಆಣೆ.
53:2
مَا ضَلَّ صَاحِبُكُمْ وَمَا غَوَىٰ ۞
ನಿಮ್ಮ ಸಂಗಾತಿ (ದೂತರು) ದಾರಿತಪ್ಪಿಲ್ಲ ಮತ್ತು ಅವರು ತಪ್ಪು ದಾರಿಯಲ್ಲಿ ನಡೆಯುತ್ತಿಲ್ಲ.
53:3
وَمَا يَنْطِقُ عَنِ الْهَوَىٰ ۞
ಅವರು ತಮ್ಮ ಅಪೇಕ್ಷೆಯಿಂದ ಮಾತನಾಡುವುದಿಲ್ಲ.
53:4
إِنْ هُوَ إِلَّا وَحْيٌ يُوحَىٰ ۞
ಇದು, (ಕುರ್‌ಆನ್) - ಅವರಿಗೆ ನೀಡಲಾಗಿರುವ ದಿವ್ಯ ಸಂದೇಶವಲ್ಲದೆ ಬೇರೇನಲ್ಲ.
53:5
عَلَّمَهُ شَدِيدُ الْقُوَىٰ ۞
ಇದನ್ನು ಅವರಿಗೆ ಶಕ್ತಿಶಾಲಿಯಾಗಿರುವವನು (ಮಲಕ್) ಕಲಿಸಿ ಕೊಟ್ಟಿರುವನು.
53:6
ذُو مِرَّةٍ فَاسْتَوَىٰ ۞
ಅವನು ತುಂಬಾ ಬಲಿಷ್ಠನು. ಅವನು (ನಿಜರೂಪದಲ್ಲಿ) ಮುಂದೆ ಬಂದನು.
53:7
وَهُوَ بِالْأُفُقِ الْأَعْلَىٰ ۞
ಅವನು ಬಾನಿನ ಎತ್ತರದ ಅಂಚಿನಲ್ಲಿದ್ದನು.
53:8
ثُمَّ دَنَا فَتَدَلَّىٰ ۞
ಮತ್ತೆ ಅವನು ಹತ್ತಿರ ಬಂದನು ಮತ್ತು ಇನ್ನಷ್ಟು ನಿಕಟನಾದನು.
53:9
فَكَانَ قَابَ قَوْسَيْنِ أَوْ أَدْنَىٰ ۞
ಕೊನೆಗೆ ಅವನು ಬಿಲ್ಲಿನ ಎರಡು ತುದಿಗಳಷ್ಟು ಅಥವಾ ಅದಕ್ಕಿಂತ ಕಡಿಮೆ ಅಂತರದಲ್ಲಿದ್ದನು.
53:10
فَأَوْحَىٰ إِلَىٰ عَبْدِهِ مَا أَوْحَىٰ ۞
ಆಬಳಿಕ, ಅವನು (ಅಲ್ಲಾಹನು) ತನ್ನ ದಾಸನಿಗೆ ನೀಡಬೇಕಾದ ಸಂದೇಶವನ್ನು ನೀಡಿದನು.
53:11
مَا كَذَبَ الْفُؤَادُ مَا رَأَىٰ ۞
ತಾನು ಕಂಡದ್ದು ಸುಳ್ಳೆಂದು ಅವರ (ದೂತರ) ಮನಸ್ಸು ಹೇಳಲಿಲ್ಲ.
53:12
أَفَتُمَارُونَهُ عَلَىٰ مَا يَرَىٰ ۞
ನೀವೀಗ, ಅವರು ಕಂಡದ್ದರ ಕುರಿತು ಅವರೊಡನೆ ಜಗಳಾಡುವಿರಾ?
53:13
وَلَقَدْ رَآهُ نَزْلَةً أُخْرَىٰ ۞
ಅವರು ಆತನನ್ನು ಎರಡನೇ ಬಾರಿಯೂ ಕಂಡರು.
53:14
عِنْدَ سِدْرَةِ الْمُنْتَهَىٰ ۞
‘ಸಿದ್ರತುಲ್ ಮುನ್‌ತಹಾ’ದ ಬಳಿ
53:15
عِنْدَهَا جَنَّةُ الْمَأْوَىٰ ۞
ಅದರ ಬಳಿಯೇ ಇದೆ, ಸ್ವರ್ಗದ ವಿಶ್ರಾಂತಿ ನಿಲಯ.
53:16
إِذْ يَغْشَى السِّدْرَةَ مَا يَغْشَىٰ ۞
ಸಿದ್ರಃವನ್ನು ಏನು ಆವರಿಸಿತೋ ಅದು ಆವರಿಸಿದಾಗ,
53:17
مَا زَاغَ الْبَصَرُ وَمَا طَغَىٰ ۞
ದೃಷ್ಟಿಯು ಎಡವಲೂ ಇಲ್ಲ, ಮಿತಿಮೀರಲೂ ಇಲ್ಲ.
53:18
لَقَدْ رَأَىٰ مِنْ آيَاتِ رَبِّهِ الْكُبْرَىٰ ۞
ಖಚಿತವಾಗಿ ಅವರು ತಮ್ಮ ಒಡೆಯನ ಕೆಲವು ದೊಡ್ಡ ಪ್ರಮಾಣಗಳನ್ನು ಕಂಡರು.
53:19
أَفَرَأَيْتُمُ اللَّاتَ وَالْعُزَّىٰ ۞
ನೀವು ಕಂಡಿರಾ ‘ಲಾತ್’ ಹಾಗೂ ‘ಉಝ್ಝ’ಗಳನ್ನು?
53:20
وَمَنَاةَ الثَّالِثَةَ الْأُخْرَىٰ ۞
ಮತ್ತು ‘ಮನಾತ್’ ಎಂಬ ಮೂರನೆಯ ಇನ್ನೊಂದನ್ನು?
53:21
أَلَكُمُ الذَّكَرُ وَلَهُ الْأُنْثَىٰ ۞
ನಿಮಗೆ ಪುತ್ರರು ಮತ್ತು ಅವನಿಗೆ (ಅಲ್ಲಾಹನಿಗೆ) ಪುತ್ರಿಯರೇ?
53:22
تِلْكَ إِذًا قِسْمَةٌ ضِيزَىٰ ۞
ಇದು ತೀರಾ ಅಸಮರ್ಪಕ ವಿತರಣೆಯಾಗಿದೆ.
53:23
إِنْ هِيَ إِلَّا أَسْمَاءٌ سَمَّيْتُمُوهَا أَنْتُمْ وَآبَاؤُكُمْ مَا أَنْزَلَ اللَّهُ بِهَا مِنْ سُلْطَانٍ ۚ إِنْ يَتَّبِعُونَ إِلَّا الظَّنَّ وَمَا تَهْوَى الْأَنْفُسُ ۖ وَلَقَدْ جَاءَهُمْ مِنْ رَبِّهِمُ الْهُدَىٰ ۞
ನಿಜವಾಗಿ ಅವೆಲ್ಲಾ ಕೇವಲ ನೀವು ಮತ್ತು ನಿಮ್ಮ ಪೂರ್ವಜರು ಇಟ್ಟು ಬಿಟ್ಟಿರುವ ಕೆಲವು ಹೆಸರುಗಳು ಮಾತ್ರ. ಅದರ ಪರವಾಗಿ ಅಲ್ಲಾಹನು ಯಾವ ಪುರಾವೆಯನ್ನೂ ಇಳಿಸಿ ಕೊಟ್ಟಿಲ್ಲ. ಅವರು ಕೇವಲ ತಮ್ಮ ಊಹೆಯನ್ನು ಹಾಗೂ ಸ್ವೇಚ್ಛೆಯನ್ನು ಮಾತ್ರವೇ ಅನುಸರಿಸುತ್ತಿದ್ದಾರೆ. ಇದೀಗ ಅವರ ಬಳಿಗೆ ಅವರ ಒಡೆಯನ ಕಡೆಯಿಂದ ಮಾರ್ಗದರ್ಶನವು ಬಂದಿದೆ.
53:24
أَمْ لِلْإِنْسَانِ مَا تَمَنَّىٰ ۞
ಮನುಷ್ಯನಿಗೇನು, ಅವನು ಬಯಸಿದ್ದೆಲ್ಲವೂ ಸಿಕ್ಕಿ ಬಿಡುತ್ತದೆಯೇ?
53:25
فَلِلَّهِ الْآخِرَةُ وَالْأُولَىٰ ۞
ನಿಜವಾಗಿ, ಅಂತ್ಯವೂ ಆದಿಯೂ ಅಲ್ಲಾಹನಿಗೇ ಸೇರಿದೆ.
53:26
۞ وَكَمْ مِنْ مَلَكٍ فِي السَّمَاوَاتِ لَا تُغْنِي شَفَاعَتُهُمْ شَيْئًا إِلَّا مِنْ بَعْدِ أَنْ يَأْذَنَ اللَّهُ لِمَنْ يَشَاءُ وَيَرْضَىٰ ۞
ಆಕಾಶಗಳಲ್ಲಿ ಅದೆಷ್ಟೋ ‘ಮಲಕ್’ಗಳಿದ್ದಾರೆ. ಅವರ ಶಿಫಾರಸ್ಸಿನಿಂದ ಯಾವ ಲಾಭವೂ ಆಗುವುದಿಲ್ಲ - ತಾನಿಚ್ಛಿಸುವವನ ಪರವಾಗಿ ಅಲ್ಲಾಹನು ಅನುಮತಿ ನೀಡುವ ಹಾಗೂ ಅವನು ಇಷ್ಟ ಪಡುವ ಮುನ್ನ.
53:27
إِنَّ الَّذِينَ لَا يُؤْمِنُونَ بِالْآخِرَةِ لَيُسَمُّونَ الْمَلَائِكَةَ تَسْمِيَةَ الْأُنْثَىٰ ۞
ಪರಲೋಕದಲ್ಲಿ ನಂಬಿಕೆ ಇಲ್ಲದವರು ಮಲಕ್‌ಗಳಿಗೆ ಹೆಣ್ಮಕ್ಕಳ ಹೆಸರುಗಳನ್ನಿಡುತ್ತಾರೆ.
53:28
وَمَا لَهُمْ بِهِ مِنْ عِلْمٍ ۖ إِنْ يَتَّبِعُونَ إِلَّا الظَّنَّ ۖ وَإِنَّ الظَّنَّ لَا يُغْنِي مِنَ الْحَقِّ شَيْئًا ۞
ಅವರಿಗೆ ಆ ಕುರಿತು ಯಾವ ಜ್ಞಾನವೂ ಇಲ್ಲ. ಅವರು ಕೇವಲ ಊಹೆಯನ್ನಷ್ಟೇ ಅನುಸರಿಸುತ್ತಿದ್ದಾರೆ. ಮತ್ತು ಊಹೆಯು ಸತ್ಯಕ್ಕೆ ಕಿಂಚಿತ್ತೂ ಪರ್ಯಾಯವಲ್ಲ.
53:29
فَأَعْرِضْ عَنْ مَنْ تَوَلَّىٰ عَنْ ذِكْرِنَا وَلَمْ يُرِدْ إِلَّا الْحَيَاةَ الدُّنْيَا ۞
ನಮ್ಮ ಉಪದೇಶದಿಂದ ಮುಖ ತಿರುಗಿಸಿ ಕೊಂಡಿರುವವನನ್ನು ಕಡೆಗಣಿಸಿರಿ - ಅವನು ಬಯಸುವುದು ಕೇವಲ ಇಹಲೋಕದ ಬದುಕನ್ನು ಮಾತ್ರ.
53:30
ذَٰلِكَ مَبْلَغُهُمْ مِنَ الْعِلْمِ ۚ إِنَّ رَبَّكَ هُوَ أَعْلَمُ بِمَنْ ضَلَّ عَنْ سَبِيلِهِ وَهُوَ أَعْلَمُ بِمَنِ اهْتَدَىٰ ۞
ಅದುವೇ ಅವರ ಜ್ಞಾನದ ಮಿತಿಯಾಗಿದೆ. ಖಂಡಿತವಾಗಿಯೂ ನಿಮ್ಮ ಒಡೆಯನು - ತನ್ನ ಮಾರ್ಗದಿಂದ ದೂರ ಸರಿದಿರುವವನು ಯಾರೆಂಬುದನ್ನು ಚೆನ್ನಾಗಿ ಬಲ್ಲನು ಮತ್ತು ಸರಿದಾರಿಯಲ್ಲಿರುವವನು ಯಾರೆಂಬುದನ್ನೂ ಅವನು ಚೆನ್ನಾಗಿ ಬಲ್ಲನು.
53:31
وَلِلَّهِ مَا فِي السَّمَاوَاتِ وَمَا فِي الْأَرْضِ لِيَجْزِيَ الَّذِينَ أَسَاءُوا بِمَا عَمِلُوا وَيَجْزِيَ الَّذِينَ أَحْسَنُوا بِالْحُسْنَى ۞
ಆಕಾಶಗಳಲ್ಲಿ ಹಾಗೂ ಭೂಮಿಯಲ್ಲಿರುವ ಎಲ್ಲವೂ ಅಲ್ಲಾಹನಿಗೇ ಸೇರಿವೆ. ಕೆಟ್ಟ ಕರ್ಮಗಳನ್ನು ಮಾಡಿದವರಿಗೆ ಅವನು ಅವರ ಕರ್ಮಕ್ಕನುಸಾರವಾದ ಪ್ರತಿಫಲವನ್ನು ನೀಡುವನು ಮತ್ತು ಸತ್ಕರ್ಮಗಳನ್ನು ಮಾಡಿದವರಿಗೆ ಸತ್ಫಲವನ್ನು ನೀಡುವನು.
53:32
الَّذِينَ يَجْتَنِبُونَ كَبَائِرَ الْإِثْمِ وَالْفَوَاحِشَ إِلَّا اللَّمَمَ ۚ إِنَّ رَبَّكَ وَاسِعُ الْمَغْفِرَةِ ۚ هُوَ أَعْلَمُ بِكُمْ إِذْ أَنْشَأَكُمْ مِنَ الْأَرْضِ وَإِذْ أَنْتُمْ أَجِنَّةٌ فِي بُطُونِ أُمَّهَاتِكُمْ ۖ فَلَا تُزَكُّوا أَنْفُسَكُمْ ۖ هُوَ أَعْلَمُ بِمَنِ اتَّقَىٰ ۞
ಅವರು (ಸತ್ಕರ್ಮಿಗಳು), ಸಣ್ಣ ಪುಟ್ಟ ಪ್ರಮಾದಗಳ ಹೊರತು, ಎಲ್ಲ ದೊಡ್ಡ ಪಾಪಕೃತ್ಯಗಳಿಂದ ಹಾಗೂ ಅಶ್ಲೀಲ ಕಾರ್ಯಗಳಿಂದ ದೂರ ಉಳಿಯುತ್ತಾರೆ. ಖಂಡಿತವಾಗಿಯೂ ನಿಮ್ಮೊಡೆಯನು ವಿಶಾಲ ಕ್ಷಮಾಗುಣ ಉಳ್ಳವನಾಗಿದ್ದಾನೆ. ಅವನಂತೂ, ತಾನು ನಿಮ್ಮನ್ನು ಭೂಮಿಯಿಂದ ಹುಟ್ಟಿಸಿದಾಗಲೂ, ನೀವು ನಿಮ್ಮ ತಾಯಂದಿರ ಗರ್ಭಗಳೊಳಗೆ ಪುಟ್ಟ ಶಿಶುಗಳಾಗಿದ್ದಾಗಲೂ ನಿಮ್ಮನ್ನು ಚೆನ್ನಾಗಿ ಬಲ್ಲನು. ನೀವು ನಿಮ್ಮ ಪಾವಿತ್ರ್ಯದ ಕುರಿತು ಕೊಚ್ಚಿಕೊಳ್ಳಬೇಡಿ. ಧರ್ಮನಿಷ್ಠನು ಯಾರೆಂಬುದನ್ನು ಅವನು ಚೆನ್ನಾಗಿ ಬಲ್ಲನು.
53:33
أَفَرَأَيْتَ الَّذِي تَوَلَّىٰ ۞
ನೀವು ನೋಡಿದಿರಾ, ಮುಖ ತಿರುಗಿಸಿ ಕೊಂಡವನನ್ನು?
53:34
وَأَعْطَىٰ قَلِيلًا وَأَكْدَىٰ ۞
ಅವನು ಸ್ವಲ್ಪವನ್ನು ಮಾತ್ರ (ದಾನವಾಗಿ) ಕೊಟ್ಟನು ಮತ್ತು (ಉಳಿದುದನ್ನು) ತಡೆದಿಟ್ಟುಕೊಂಡನು.
53:35
أَعِنْدَهُ عِلْمُ الْغَيْبِ فَهُوَ يَرَىٰ ۞
ಅವನ ಬಳಿ ಕಾಣದ ಲೋಕದ ಜ್ಞಾನವಿದೆಯೇ ಮತ್ತು ಅವನು ಅದನ್ನು (ಕಾಣದ ಲೋಕವನ್ನು) ಕಾಣುತ್ತಿದ್ದಾನೆಯೇ?
53:36
أَمْ لَمْ يُنَبَّأْ بِمَا فِي صُحُفِ مُوسَىٰ ۞
ಅವನಿಗೆ ತಿಳಿಸಲಾಗಿಲ್ಲವೇ, ಮೂಸಾರ ಹೊತ್ತಗೆ(ಗ್ರಂಥ)ಗಳಲ್ಲಿರುವ ವಿಷಯವನ್ನು?
53:37
وَإِبْرَاهِيمَ الَّذِي وَفَّىٰ ۞
ಮತ್ತು (ದಿವ್ಯಾದೇಶಗಳನ್ನು) ಪಾಲಿಸಿದ ಇಬ್ರಾಹೀಮರ (ಸಮಾಚಾರವನ್ನು)?
53:38
أَلَّا تَزِرُ وَازِرَةٌ وِزْرَ أُخْرَىٰ ۞
(ಪರಲೋಕದಲ್ಲಿ) ಹೊರೆ ಹೊರುವ ಯಾವನೂ ಇನ್ನೊಬ್ಬನ ಹೊರೆಯನ್ನು ಹೊರಲಾರನು.
53:39
وَأَنْ لَيْسَ لِلْإِنْسَانِ إِلَّا مَا سَعَىٰ ۞
ಮತ್ತು ಮಾನವನಿಗೆ, ಅವನು ಶ್ರಮಿಸಿದಷ್ಟಲ್ಲದೆ ಬೇರೇನೂ ಸಿಗದು.
53:40
وَأَنَّ سَعْيَهُ سَوْفَ يُرَىٰ ۞
ಮತ್ತು ಅವನ ಶ್ರಮವು (ಪ್ರತಿಫಲದ ರೂಪದಲ್ಲಿ) ಬೇಗನೇ ಕಾಣಲು ಸಿಗುವುದು.
53:41
ثُمَّ يُجْزَاهُ الْجَزَاءَ الْأَوْفَىٰ ۞
ಆ ಬಳಿಕ ಅವನಿಗೆ ಪೂರ್ಣ ಪ್ರತಿಫಲ ನೀಡಲಾಗುವುದು.
53:42
وَأَنَّ إِلَىٰ رَبِّكَ الْمُنْتَهَىٰ ۞
ಮತ್ತು (ಎಲ್ಲವೂ ತೆರಳುವ) ಅಂತಿಮ ನೆಲೆಯು ನಿಮ್ಮ ಒಡೆಯನ ಕಡೆಗೇ ಇದೆ.
53:43
وَأَنَّهُ هُوَ أَضْحَكَ وَأَبْكَىٰ ۞
ಖಂಡಿತವಾಗಿಯೂ ಅವನೇ (ಅಲ್ಲಾಹನೇ) ನಗಿಸುತ್ತಾನೆ ಮತ್ತು ಅಳು ಬರಿಸುತ್ತಾನೆ.
53:44
وَأَنَّهُ هُوَ أَمَاتَ وَأَحْيَا ۞
ಮತ್ತು ಅವನೇ ಸಾಯಿಸುತ್ತಾನೆ ಮತ್ತು ಬದುಕಿಸುತ್ತಾನೆ.
53:45
وَأَنَّهُ خَلَقَ الزَّوْجَيْنِ الذَّكَرَ وَالْأُنْثَىٰ ۞
ಅವನೇ, ಗಂಡು ಮತ್ತು ಹೆಣ್ಣೆಂಬ ಜೊತೆಗಳನ್ನು ಸೃಷ್ಟಿಸಿದವನು -
53:46
مِنْ نُطْفَةٍ إِذَا تُمْنَىٰ ۞
- ಸುರಿಸಲಾದ ವೀರ್ಯದಿಂದ.
53:47
وَأَنَّ عَلَيْهِ النَّشْأَةَ الْأُخْرَىٰ ۞
ಪುನಃ ಜೀವಂತಗೊಳಿಸುವ ಹೊಣೆಯೂ ಅವನ ಮೇಲೆಯೇ ಇದೆ.
53:48
وَأَنَّهُ هُوَ أَغْنَىٰ وَأَقْنَىٰ ۞
ಅವನೇ, ಸ್ವಾಯತ್ತಗೊಳಿಸಿದವನು ಹಾಗೂ ಸಂಪನ್ನಗೊಳಿಸಿದವನು.
53:49
وَأَنَّهُ هُوَ رَبُّ الشِّعْرَىٰ ۞
ಅವನೇ ‘ಶಿಅ್'ರಾ’ದ (ತಾರೆಯ) ಒಡೆಯನು.*
53:50
وَأَنَّهُ أَهْلَكَ عَادًا الْأُولَىٰ ۞
ಅವನೇ, ಪ್ರಥಮ ‘ಆದ್’ರನ್ನು ನಾಶ ಮಾಡಿದವನು.
53:51
وَثَمُودَ فَمَا أَبْقَىٰ ۞
ಮತ್ತು ಸಮೂದರನ್ನೂ ಅಷ್ಟೇ. ಅವನು (ಅವರಲ್ಲಿ) ಯಾರನ್ನೂ ಉಳಿಸಲಿಲ್ಲ.
53:52
وَقَوْمَ نُوحٍ مِنْ قَبْلُ ۖ إِنَّهُمْ كَانُوا هُمْ أَظْلَمَ وَأَطْغَىٰ ۞
ಈ ಹಿಂದೆ ನೂಹರ ಜನಾಂಗವನ್ನು (ಅವನು ನಾಶಮಾಡಿದ್ದನು). ಖಂಡಿತವಾಗಿಯೂ ಅವರು ತುಂಬಾ ಅಕ್ರಮಿಗಳಾಗಿದ್ದರು ಹಾಗೂ ವಿದ್ರೋಹಿಗಳಾಗಿದ್ದರು.
53:53
وَالْمُؤْتَفِكَةَ أَهْوَىٰ ۞
ಮತ್ತು ಅವನು ಮಗುಚಿ ಬಿದ್ದ (ಲೂತ್‌ರ ಜನಾಂಗದ) ನಾಡನ್ನು ನುಚ್ಚು ನೂರು ಮಾಡಿದನು.
53:54
فَغَشَّاهَا مَا غَشَّىٰ ۞
ಆವರಿಸುವ ವಸ್ತುವೊಂದು ಅದನ್ನು (ಆ ನಾಡನ್ನು) ಆವರಿಸಿಕೊಂಡಿತ್ತು.
53:55
فَبِأَيِّ آلَاءِ رَبِّكَ تَتَمَارَىٰ ۞
(ಮಾನವಾ,) ನೀನಿನ್ನು ನಿನ್ನೊಡೆಯನ ಯಾವೆಲ್ಲ ಕೊಡುಗೆಗಳ ಕುರಿತು ಸಂಶಯಿಸುವೆ?
53:56
هَٰذَا نَذِيرٌ مِنَ النُّذُرِ الْأُولَىٰ ۞
ಅವರು (ದೂತರು) ಈ ಹಿಂದೆ ಎಚ್ಚರಿಸಲು ಬಂದವರ ಸಾಲಿನ, ಒಬ್ಬ ಎಚ್ಚರಿಸುವವರಾಗಿದ್ದಾರೆ.
53:57
أَزِفَتِ الْآزِفَةُ ۞
ಹತ್ತಿರ ಬರಬೇಕಾದುದು (ಲೋಕಾಂತ್ಯದ ಘಳಿಗೆ) ಹತ್ತಿರ ಬಂದು ಬಿಟ್ಟಿದೆ.
53:58
لَيْسَ لَهَا مِنْ دُونِ اللَّهِ كَاشِفَةٌ ۞
ಅಲ್ಲಾಹನ ಹೊರತು ಬೇರಾರೂ ಅದನ್ನು ನಿವಾರಿಸಲಾರರು.
53:59
أَفَمِنْ هَٰذَا الْحَدِيثِ تَعْجَبُونَ ۞
ನೀವೇನು ಈ ಮಾತಿನ ಕುರಿತು ಅಚ್ಚರಿ ಪಡುತ್ತಿದ್ದೀರಾ?
53:60
وَتَضْحَكُونَ وَلَا تَبْكُونَ ۞
ಮತ್ತು ನೀವು ನಗುತ್ತೀರಿ, ಅಳುವುದಿಲ್ಲ.
53:61
وَأَنْتُمْ سَامِدُونَ ۞
ನೀವು ಭಾರೀ ದೊಡ್ಡಸ್ತಿಕೆ ಮೆರೆಯುತ್ತೀರಿ.
53:62
فَاسْجُدُوا لِلَّهِ وَاعْبُدُوا ۩ ۞
ಇನ್ನಾದರೂ, ನೀವು ಅಲ್ಲಾಹನಿಗೆ ಸಾಷ್ಟಾಂಗ ವಂದಿಸಿರಿ ಮತ್ತು ಅವನನ್ನೇ ಆರಾಧಿಸಿರಿ.