Al-Haqqah (The reality)
69. ಅಲ್ ಹಾಕ್ಕಃ(ನೈಜ ಸಂಭವ)
ಅಲ್ಲಾಹನ ಹೆಸರಿಂದ - ಅವನು ಅಪಾರ ದಯಾಳು, ಕರುಣಾಮಯಿ.
69:1
الْحَاقَّةُ ۞
ನೈಜ ಸಂಭವ.
69:2
مَا الْحَاقَّةُ ۞
ಏನದು ನೈಜ ಸಂಭವ?
69:3
وَمَا أَدْرَاكَ مَا الْحَاقَّةُ ۞
ನಿಮಗೇನು ಗೊತ್ತು, ಆ ನೈಜ ಸಂಭವದ ಕುರಿತು?
69:4
كَذَّبَتْ ثَمُودُ وَعَادٌ بِالْقَارِعَةِ ۞
ಸಮೂದ್ ಮತ್ತು ಆದ್ ಜನಾಂಗದವರು ಆ ಹಠಾತ್ ಸಂಭವವನ್ನು ಅಲ್ಲಗಳೆದರು.
69:5
فَأَمَّا ثَمُودُ فَأُهْلِكُوا بِالطَّاغِيَةِ ۞
ಕೊನೆಗೆ ಸಮೂದರನ್ನು ಸಿಡಿಲಿಗೆ ತುತ್ತಾಗಿಸಿ ನಾಶ ಮಾಡಲಾಯಿತು.
69:6
وَأَمَّا عَادٌ فَأُهْلِكُوا بِرِيحٍ صَرْصَرٍ عَاتِيَةٍ ۞
ಇನ್ನು, ಆದ್‌ರನ್ನು ತೀವ್ರ ವೇಗದ ಬಿರುಗಾಳಿಯೊಂದರ ಮೂಲಕ ನಾಶ ಮಾಡಲಾಯಿತು.
69:7
سَخَّرَهَا عَلَيْهِمْ سَبْعَ لَيَالٍ وَثَمَانِيَةَ أَيَّامٍ حُسُومًا فَتَرَى الْقَوْمَ فِيهَا صَرْعَىٰ كَأَنَّهُمْ أَعْجَازُ نَخْلٍ خَاوِيَةٍ ۞
ಅದನ್ನು ಸತತ ಏಳು ರಾತ್ರಿ ಹಾಗೂ ಎಂಟು ದಿನಗಳ ಕಾಲ ಅವರ ಮೇಲೆ ಹೇರಲಾಯಿತು. ಮತ್ತು ಅಲ್ಲಿದ್ದವರೆಲ್ಲರೂ ಟೊಳ್ಳಾದ ಖರ್ಜೂರದ ಕಾಂಡಗಳೋ ಎಂಬಂತೆ ಸತ್ತು ಬಿದ್ದಿರುವುದು ನಿಮಗೆ ಕಾಣಿಸುತ್ತಿತ್ತು.
69:8
فَهَلْ تَرَىٰ لَهُمْ مِنْ بَاقِيَةٍ ۞
ಅವರ ಪೈಕಿ ಉಳಿದಿರುವ ಯಾರಾದರೂ ನಿಮಗೆ ಕಾಣಿಸುತ್ತಿದ್ದಾರೆಯೇ?
69:9
وَجَاءَ فِرْعَوْنُ وَمَنْ قَبْلَهُ وَالْمُؤْتَفِكَاتُ بِالْخَاطِئَةِ ۞
ಫಿರ್‌ಔನ್ ಹಾಗೂ ಅವನಿಗಿಂತ ಹಿಂದಿನವರು ಮತ್ತು ಬುಡಮೇಲಾದ ನಾಡಿನವರು ಅಪರಾಧಗಳನ್ನು ಎಸಗಿದ್ದರು.
69:10
فَعَصَوْا رَسُولَ رَبِّهِمْ فَأَخَذَهُمْ أَخْذَةً رَابِيَةً ۞
ಅವರು ತಮ್ಮ ಒಡೆಯನ (ಅಲ್ಲಾಹನ) ದೂತರ ಆದೇಶಗಳನ್ನು ಮೀರಿ ನಡೆದಾಗ ಅವನು ಅವರನ್ನು ಬಹಳ ಕಠೋರವಾಗಿ ದಂಡಿಸಿದನು.
69:11
إِنَّا لَمَّا طَغَى الْمَاءُ حَمَلْنَاكُمْ فِي الْجَارِيَةِ ۞
ಪ್ರವಾಹವು ಮಿತಿಮೀರಿದಾಗ ನಾವು ನಿಮ್ಮನ್ನು ಹಡಗಿಗೆ ಹತ್ತಿಸಿದೆವು.
69:12
لِنَجْعَلَهَا لَكُمْ تَذْكِرَةً وَتَعِيَهَا أُذُنٌ وَاعِيَةٌ ۞
ಅದನ್ನು ನಿಮ್ಮ ಪಾಲಿಗೆ ಸ್ಮಾರಕವಾಗಿಸಲಿಕ್ಕಾಗಿ ಮತ್ತು ನೆನಪಿಡುವ ಕಿವಿಗಳು ಅದನ್ನು ನೆನಪಿಡಲೆಂದು.
69:13
فَإِذَا نُفِخَ فِي الصُّورِ نَفْخَةٌ وَاحِدَةٌ ۞
ಕಹಳೆಯನ್ನು ಒಂದು ಬಾರಿ ಊದಿದಾಗ,
69:14
وَحُمِلَتِ الْأَرْضُ وَالْجِبَالُ فَدُكَّتَا دَكَّةً وَاحِدَةً ۞
ಭೂಮಿಯನ್ನೂ ಪರ್ವತಗಳನ್ನೂ ಮೇಲಕ್ಕೆತ್ತಲಾಗುವುದು ಮತ್ತು ಅವೆರಡನ್ನೂ ಪುಡಿಗಟ್ಟಿ ಒಮ್ಮೆಗೇ ನೆಲಸಮಗೊಳಿಸಲಾಗುವುದು.
69:15
فَيَوْمَئِذٍ وَقَعَتِ الْوَاقِعَةُ ۞
ಅಂದು ಸಂಭವಿಸಲಿದೆ, ಆ ನೈಜ ಸಂಭವ.
69:16
وَانْشَقَّتِ السَّمَاءُ فَهِيَ يَوْمَئِذٍ وَاهِيَةٌ ۞
ಆಕಾಶವು ಬಿರಿದು ಬಿಡುವುದು ಮತ್ತು ಅಂದು ಅದು ತೀರಾ ದುರ್ಬಲ ವಾಗಿರುವುದು.
69:17
وَالْمَلَكُ عَلَىٰ أَرْجَائِهَا ۚ وَيَحْمِلُ عَرْشَ رَبِّكَ فَوْقَهُمْ يَوْمَئِذٍ ثَمَانِيَةٌ ۞
ಮಲಕ್‌ಗಳು ಅದರ ಸುತ್ತಲೂ ಇರುವರು, ಮತ್ತು ಆ ದಿನ ಎಂಟು ಮಂದಿ (ಮಲಕ್‌ಗಳು) ನಿಮ್ಮೊಡೆಯನ ಪೀಠವನ್ನು ತಮ್ಮ ಮೇಲೆ ಹೊತ್ತಿರುವರು.
69:18
يَوْمَئِذٍ تُعْرَضُونَ لَا تَخْفَىٰ مِنْكُمْ خَافِيَةٌ ۞
ಅಂದು ನಿಮ್ಮನ್ನು (ಎಲ್ಲರ ಮುಂದೆ) ಹಾಜರುಪಡಿಸಲಾಗುವುದು ಮತ್ತು ನಿಮ್ಮ ಯಾವ ವಿಷಯವೂ ಗುಪ್ತವಾಗಿ ಉಳಿಯದು.
69:19
فَأَمَّا مَنْ أُوتِيَ كِتَابَهُ بِيَمِينِهِ فَيَقُولُ هَاؤُمُ اقْرَءُوا كِتَابِيَهْ ۞
ಕರ್ಮಪತ್ರವನ್ನು ಬಲಗೈಯಲ್ಲಿ ನೀಡಲಾದವನು (ಇತರರೊಡನೆ) ಹೇಳುವನು; ‘‘ಇದೋ ನನ್ನ ಕರ್ಮಪತ್ರವನ್ನು ಓದಿರಿ.’’
69:20
إِنِّي ظَنَنْتُ أَنِّي مُلَاقٍ حِسَابِيَهْ ۞
‘‘ನಾನು ನನ್ನ ವಿಚಾರಣೆಯನ್ನು ಖಂಡಿತ ಎದುರಿಸಬೇಕಾಗುವುದು ಎಂದು ನಾನು ಮೊದಲೇ ನಂಬಿದ್ದೆ.’’
69:21
فَهُوَ فِي عِيشَةٍ رَاضِيَةٍ ۞
ಅವನು ಧಾರಾಳ ಸುಖದಲ್ಲಿರುವವನು.
69:22
فِي جَنَّةٍ عَالِيَةٍ ۞
ಎತ್ತರವಾದ ಸ್ವರ್ಗ ತೋಟಗಳಲ್ಲಿ.
69:23
قُطُوفُهَا دَانِيَةٌ ۞
ಅಲ್ಲಿಯ ಹಣ್ಣಿನ ಗೊಂಚಲುಗಳು ಬಾಗಿರುವವು.
69:24
كُلُوا وَاشْرَبُوا هَنِيئًا بِمَا أَسْلَفْتُمْ فِي الْأَيَّامِ الْخَالِيَةِ ۞
(ಅವರೊಡನೆ ಹೇಳಲಾಗುವುದು;) ಕಳೆದು ಹೋದ ದಿನಗಳಲ್ಲಿ ನೀವು ಮಾಡಿದ್ದ ಕರ್ಮಗಳ ಫಲವಾಗಿ (ಇಂದು) ಮೋಜು ಮಾಡುತ್ತಾ ತಿನ್ನಿರಿ ಹಾಗೂ ಕುಡಿಯಿರಿ.
69:25
وَأَمَّا مَنْ أُوتِيَ كِتَابَهُ بِشِمَالِهِ فَيَقُولُ يَا لَيْتَنِي لَمْ أُوتَ كِتَابِيَهْ ۞
ಕರ್ಮ ಪತ್ರವನ್ನು ಎಡಗೈಯಲ್ಲಿ ನೀಡಲಾದವನು ಹೇಳುವನು; ‘‘ಅಯ್ಯೋ, ನನಗೆ ನನ್ನ ಕರ್ಮಪತ್ರವು ಸಿಗದೆ ಇದ್ದಿದ್ದರೆ ಚೆನ್ನಾಗಿತ್ತು!’’
69:26
وَلَمْ أَدْرِ مَا حِسَابِيَهْ ۞
‘‘ಮತ್ತು ನನ್ನ ಫಲಿತಾಂಶ ಏನೆಂಬುದು ನನಗೆ ತಿಳಿಯದೆ ಇದ್ದಿದ್ದರೆ ಚೆನ್ನಾಗಿತ್ತು.’’
69:27
يَا لَيْتَهَا كَانَتِ الْقَاضِيَةَ ۞
‘‘ಅಯ್ಯೋ, ಆ ನನ್ನ ಮರಣವೇ ಅಂತಿಮವಾಗಿದ್ದರೆ ಚೆನ್ನಾಗಿತ್ತು.’’
69:28
مَا أَغْنَىٰ عَنِّي مَالِيَهْ ۜ ۞
‘‘ಇಂದು ನನ್ನ ಸಂಪತ್ತಿನಿಂದ ನನಗೆ ಯಾವ ಲಾಭವೂ ಇಲ್ಲ.’’
69:29
هَلَكَ عَنِّي سُلْطَانِيَهْ ۞
‘‘ನನ್ನ ಅಧಿಕಾರವೆಲ್ಲವೂ ನನ್ನಿಂದ ಕಳೆದು ಹೋಗಿದೆ.’’
69:30
خُذُوهُ فَغُلُّوهُ ۞
ಆಗ ಆದೇಶಿಸಲಾಗುವುದು; ಅವನನ್ನು ಹಿಡಿಯಿರಿ ಮತ್ತು ನೊಗವನ್ನು ತೊಡಿಸಿರಿ.
69:31
ثُمَّ الْجَحِيمَ صَلُّوهُ ۞
ಮತ್ತು ಅವನನ್ನು ನರಕದ ಬೆಂಕಿಗೆ ಎಸೆದು ಬಿಡಿರಿ.
69:32
ثُمَّ فِي سِلْسِلَةٍ ذَرْعُهَا سَبْعُونَ ذِرَاعًا فَاسْلُكُوهُ ۞
ಮತ್ತು ಅವನನ್ನು ಎಪ್ಪತ್ತು ಗಜ ಉದ್ದದ ಸಂಕೋಲೆಯಲ್ಲಿ ಬಿಗಿದು ಕಟ್ಟಿರಿ.
69:33
إِنَّهُ كَانَ لَا يُؤْمِنُ بِاللَّهِ الْعَظِيمِ ۞
ಅವನು ಮಹೋನ್ನತನಾದ ಅಲ್ಲಾಹನಲ್ಲಿ ನಂಬಿಕೆ ಇಟ್ಟಿರಲಿಲ್ಲ.
69:34
وَلَا يَحُضُّ عَلَىٰ طَعَامِ الْمِسْكِينِ ۞
ಮತ್ತು ಅವನು ಬಡವರಿಗೆ ಉಣಿಸುವುದಕ್ಕೆ ಯಾರನ್ನೂ ಪ್ರೇರೇಪಿಸುತ್ತಿರಲಿಲ್ಲ.
69:35
فَلَيْسَ لَهُ الْيَوْمَ هَاهُنَا حَمِيمٌ ۞
ಇಂದು, ಅವನಿಗಿಲ್ಲಿ ಮಿತ್ರರು ಯಾರೂ ಇಲ್ಲ.
69:36
وَلَا طَعَامٌ إِلَّا مِنْ غِسْلِينٍ ۞
ಕೀವಿನ ಹೊರತು ಬೇರೆ ಯಾವ ಆಹಾರವೂ ಅವನಿಗೆ ದಕ್ಕದು.
69:37
لَا يَأْكُلُهُ إِلَّا الْخَاطِئُونَ ۞
ಮತ್ತು ಅದನ್ನು ಅಪರಾಧಿಗಳ ಹೊರತು ಬೇರೆ ಯಾರೂ ತಿನ್ನಲಾರರು.
69:38
فَلَا أُقْسِمُ بِمَا تُبْصِرُونَ ۞
ನಾನು ನಿಮಗೆ ಕಾಣುವ ವಸ್ತುಗಳ ಆಣೆ ಹಾಕಿ ಹೇಳುತ್ತಿದ್ದೇನೆ,
69:39
وَمَا لَا تُبْصِرُونَ ۞
ಮತ್ತು ನಾನು ನಿಮಗೆ ಕಾಣದ ವಸ್ತುಗಳ ಆಣೆ ಹಾಕಿ ಹೇಳುತ್ತಿದ್ದೇನೆ,
69:40
إِنَّهُ لَقَوْلُ رَسُولٍ كَرِيمٍ ۞
ಖಂಡಿತವಾಗಿಯೂ ಇದು ಒಬ್ಬ ಗೌರವಾನ್ವಿತ ದೂತನ ಮಾತು.
69:41
وَمَا هُوَ بِقَوْلِ شَاعِرٍ ۚ قَلِيلًا مَا تُؤْمِنُونَ ۞
ಇದು ಯಾವುದೇ ಕವಿಯ ಮಾತಲ್ಲ. ಅದರೆ ನೀವು ನಂಬುವುದು ಮಾತ್ರ ಕಡಿಮೆ.
69:42
وَلَا بِقَوْلِ كَاهِنٍ ۚ قَلِيلًا مَا تَذَكَّرُونَ ۞
ಇದು ಯಾವುದೇ ಮಾಂತ್ರಿಕನ ಮಾತಲ್ಲ. ನೀವು ಪಾಠ ಕಲಿಯುವುದು ತುಂಬಾ ಕಡಿಮೆ.
69:43
تَنْزِيلٌ مِنْ رَبِّ الْعَالَمِينَ ۞
ಇದು ಸಕಲ ಲೋಕಗಳ ಒಡೆಯನು ಇಳಿಸಿ ಕೊಟ್ಟಿರುವ ಸಂದೇಶ.
69:44
وَلَوْ تَقَوَّلَ عَلَيْنَا بَعْضَ الْأَقَاوِيلِ ۞
ಒಂದು ವೇಳೆ ಅವರು (ದೂತರು) ನಮ್ಮ ಕುರಿತು ಏನಾದರೂ ಸುಳ್ಳು ಹೇಳುತ್ತಿದ್ದರೆ,
69:45
لَأَخَذْنَا مِنْهُ بِالْيَمِينِ ۞
ನಾವು ಅವರ ಬಲಗೈಯನ್ನು ಹಿಡಿಯುತ್ತಿದ್ದೆವು,
69:46
ثُمَّ لَقَطَعْنَا مِنْهُ الْوَتِينَ ۞
ಮತ್ತು ನಾವು ಅವರ ಜೀವನಾಡಿಯನ್ನು ಕತ್ತರಿಸಿ ಬಿಡುತ್ತಿದ್ದೆವು.
69:47
فَمَا مِنْكُمْ مِنْ أَحَدٍ عَنْهُ حَاجِزِينَ ۞
ನಿಮ್ಮ ಪೈಕಿ ಯಾರಿಗೂ ನಮ್ಮನ್ನು ತಡೆಯಲು ಸಾಧ್ಯವಿರಲಿಲ್ಲ.
69:48
وَإِنَّهُ لَتَذْكِرَةٌ لِلْمُتَّقِينَ ۞
ಇದು (ಈ ಗ್ರಂಥವು) ಖಂಡಿತ ಧರ್ಮನಿಷ್ಠರ ಪಾಲಿಗೆ ಒಂದು ಉಪದೇಶವಾಗಿದೆ.
69:49
وَإِنَّا لَنَعْلَمُ أَنَّ مِنْكُمْ مُكَذِّبِينَ ۞
ನಿಮ್ಮ ನಡುವೆ ಸುಳ್ಳುಗಾರರು ಇರುವ ಕುರಿತು ನಮಗೆ ತಿಳಿದಿದೆ.
69:50
وَإِنَّهُ لَحَسْرَةٌ عَلَى الْكَافِرِينَ ۞
ಖಂಡಿತವಾಗಿಯೂ ಇದು, ಧಿಕ್ಕಾರಿಗಳು ಪರಿತಪಿಸುವುದಕ್ಕೆ ಕಾರಣವಾಗಲಿದೆ..
69:51
وَإِنَّهُ لَحَقُّ الْيَقِينِ ۞
ಇದು ನಿಸ್ಸಂದೇಹವಾಗಿಯೂ ನಂಬಲರ್ಹ ಸತ್ಯವಾಗಿದೆ.
69:52
فَسَبِّحْ بِاسْمِ رَبِّكَ الْعَظِيمِ ۞
ನೀವು ಮಹೋನ್ನತನಾದ ನಿಮ್ಮ ಒಡೆಯನ ನಾಮದ ಪಾವಿತ್ರ್ಯವನ್ನು ಜಪಿಸಿರಿ.