Al-Mutaffifeen (Defrauding)
83. ಅಲ್ ಮುತಫ್ಫಿಫೀನ್(ಕಡಿಮೆ ಕೊಡುವವರು)
﷽
ಅಲ್ಲಾಹನ ಹೆಸರಿಂದ - ಅವನು ಅಪಾರ ದಯಾಳು, ಕರುಣಾಮಯಿ.
الَّذِينَ إِذَا اكْتَالُوا عَلَى النَّاسِ يَسْتَوْفُونَ
۞
ಅವರು ಜನರಿಂದ ಅಳೆದು ಪಡೆಯುವಾಗ ಪೂರ್ಣವಾಗಿ ಪಡೆಯುತ್ತಾರೆ.
وَإِذَا كَالُوهُمْ أَوْ وَزَنُوهُمْ يُخْسِرُونَ
۞
ಆದರೆ ಇತರರಿಗೆ ಅಳೆದು ಅಥವಾ ತೂಗಿ ಕೊಡುವಾಗ ಕಡಿಮೆಗೊಳಿಸಿ ಕೊಡುತ್ತಾರೆ.
أَلَا يَظُنُّ أُولَٰئِكَ أَنَّهُمْ مَبْعُوثُونَ
۞
ಅವರನ್ನು ಮತ್ತೆ ಜೀವಂತ ಗೊಳಿಸಲಾಗುವುದೆಂದು ಅವರಿಗೇನು ತಿಳಿಯದೇ?
يَوْمَ يَقُومُ النَّاسُ لِرَبِّ الْعَالَمِينَ
۞
ಅಂದು ಮಾನವರೆಲ್ಲಾ ವಿಶ್ವದೊಡೆಯನ ಮುಂದೆ ನಿಲ್ಲುವರು.
كَلَّا إِنَّ كِتَابَ الْفُجَّارِ لَفِي سِجِّينٍ
۞
ನಿಮಗೆ ತಿಳಿದಿರಲಿ, ದುಷ್ಟರ ಕರ್ಮಗಳು ‘ಸಿಜ್ಜೀನ್’ನಲ್ಲಿವೆ.
الَّذِينَ يُكَذِّبُونَ بِيَوْمِ الدِّينِ
۞
ಅವರು ಪ್ರತಿಫಲದ ದಿನವನ್ನು ತಿರಸ್ಕರಿಸುತ್ತಾರೆ.
وَمَا يُكَذِّبُ بِهِ إِلَّا كُلُّ مُعْتَدٍ أَثِيمٍ
۞
ನಿಜವಾಗಿ, ಎಲ್ಲೆ ಮೀರಿದ ಪಾಪಿ ಮಾತ್ರ ಅದನ್ನು ಧಿಕ್ಕರಿಸುತ್ತಾನೆ.
إِذَا تُتْلَىٰ عَلَيْهِ آيَاتُنَا قَالَ أَسَاطِيرُ الْأَوَّلِينَ
۞
ಅವನಿಗೆ ನಮ್ಮ ವಚನಗಳನ್ನು ಓದಿ ಕೇಳಿಸಲಾದಾಗ ಅವನು, ಇವೆಲ್ಲ ಗತಕಾಲದ ಕಥೆಗಳು ಎನ್ನುತ್ತಾನೆ.
كَلَّا ۖ بَلْ ۜ رَانَ عَلَىٰ قُلُوبِهِمْ مَا كَانُوا يَكْسِبُونَ
۞
ಹಾಗಲ್ಲ - ನಿಜವಾಗಿ ಅವರು ಮಾಡಿದ್ದ ಕರ್ಮಗಳು ಅವರ ಮನಸ್ಸುಗಳಿಗೆ ತುಕ್ಕು ಹಿಡಿಸಿವೆ.
كَلَّا إِنَّهُمْ عَنْ رَبِّهِمْ يَوْمَئِذٍ لَمَحْجُوبُونَ
۞
ಹಾಗಲ್ಲ - ಅಂದು ಅವರು ತನ್ನ ಒಡೆಯನಿಂದ ಮರೆಯಲ್ಲಿರುವರು.
ثُمَّ يُقَالُ هَٰذَا الَّذِي كُنْتُمْ بِهِ تُكَذِّبُونَ
۞
ನೀವು ತಿರಸ್ಕರಿಸುತ್ತಿದ್ದುದು ಇದನ್ನೇ ಎಂದು ಅವರೊಡನೆ ಹೇಳಲಾಗುವುದು.
كَلَّا إِنَّ كِتَابَ الْأَبْرَارِ لَفِي عِلِّيِّينَ
۞
ನಿಮಗೆ ತಿಳಿದಿರಲಿ; ಸಜ್ಜನರ ಕರ್ಮ ಪತ್ರವು ‘ಇಲ್ಲಿಯ್ಯೀನ್’ನಲ್ಲಿರುವುದು.
تَعْرِفُ فِي وُجُوهِهِمْ نَضْرَةَ النَّعِيمِ
۞
ನೀವು ಅವರ ಮುಖಗಳಲ್ಲಿ ಸುಖದ ಉಲ್ಲಾಸವನ್ನು ಕಾಣುವಿರಿ.
يُسْقَوْنَ مِنْ رَحِيقٍ مَخْتُومٍ
۞
ಅವರಿಗೆ ಮುದ್ರೆ ಹಾಕಿ ಮುಚ್ಚಿಟ್ಟಿದ್ದ ಶುದ್ಧ ಮದಿರೆಯನ್ನು ಕುಡಿಸಲಾಗುವುದು.
خِتَامُهُ مِسْكٌ ۚ وَفِي ذَٰلِكَ فَلْيَتَنَافَسِ الْمُتَنَافِسُونَ
۞
ಅದರ ಮುದ್ರೆ ಕಸ್ತೂರಿಯದ್ದಾಗಿರುವುದು, ಸ್ಪರ್ಧಿಸುವವರು ಇದನ್ನು ಪಡೆಯಲು ಸ್ಪರ್ಧಿಸಲಿ.
عَيْنًا يَشْرَبُ بِهَا الْمُقَرَّبُونَ
۞
ಅದೊಂದು ಚಿಲುಮೆ. ಅಲ್ಲಾಹನ ಆಪ್ತರಾಗಿರುವವರು (ಸ್ವರ್ಗವಾಸಿಗಳು) ಅದನ್ನು ಸೇವಿಸುವರು.
إِنَّ الَّذِينَ أَجْرَمُوا كَانُوا مِنَ الَّذِينَ آمَنُوا يَضْحَكُونَ
۞
ಅಪರಾಧಿಗಳು (ಇಹಲೋಕದಲ್ಲಿ) ವಿಶ್ವಾಸಿಗಳನ್ನು ಕಂಡು (ಗೇಲಿ ಮಾಡಿ) ನಗುತ್ತಿದ್ದರು.
وَإِذَا مَرُّوا بِهِمْ يَتَغَامَزُونَ
۞
ಅವರ ಬಳಿಯಿಂದ ಹಾದು ಹೋಗುವಾಗ ತಾತ್ಸಾರದಿಂದ ಕೈ ಸನ್ನೆಗಳನ್ನು ಮಾಡುತ್ತಿದ್ದರು.
وَإِذَا انْقَلَبُوا إِلَىٰ أَهْلِهِمُ انْقَلَبُوا فَكِهِينَ
۞
ಅವರು ತಮ್ಮ ಮನೆಯವರ ಬಳಿಗೆ ಮರಳುವಾಗ ಹೆಮ್ಮೆಯಿಂದ ಬೀಗುತ್ತಾ ಮರಳುತ್ತಿದ್ದರು.
وَإِذَا رَأَوْهُمْ قَالُوا إِنَّ هَٰؤُلَاءِ لَضَالُّونَ
۞
ಅವರು ಇವರನ್ನು (ವಿಶ್ವಾಸಿಗಳನ್ನು) ಕಂಡಾಗ, ಇವರು ದಾರಿಗೆಟ್ಟವರು ಎನ್ನುತ್ತಿದ್ದರು.
وَمَا أُرْسِلُوا عَلَيْهِمْ حَافِظِينَ
۞
ನಿಜವಾಗಿ ಅವರನ್ನು ಇವರ ಮೇಲ್ವಿಚಾರಣೆಗೇನೂ ಕಳಿಸಲಾಗಿರಲಿಲ್ಲ.
فَالْيَوْمَ الَّذِينَ آمَنُوا مِنَ الْكُفَّارِ يَضْحَكُونَ
۞
ಆದರೆ ಇಂದು ವಿಶ್ವಾಸಿಗಳು ಧಿಕ್ಕಾರಿಗಳನ್ನು ಕಂಡು ನಗುವರು.
عَلَى الْأَرَائِكِ يَنْظُرُونَ
۞
ವೈಭವದ ಆಸನದಲ್ಲಿದ್ದು (ಧಿಕ್ಕಾರಿಗಳ ಗತಿಯನ್ನು) ಕಾಣುತ್ತಿರುವರು.